15 ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, "ಯೋಹಾನನ ಮಗನಾದ ಸೀಮೋನನೇ, 21:15 ಮತ್ತಾ 26:33; ಮಾರ್ಕ 14:29:ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?" ಎಂದು ಕೇಳಲು ಅವನು "ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ" ಎಂದನು. ಆತನು ಅವನಿಗೆ, "ನನ್ನ ಕುರಿಮರಿಗಳನ್ನು ಮೇಯಿಸು" ಎಂದು ಹೇಳಿದನು. 19 ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ "ನನ್ನನ್ನು ಹಿಂಬಾಲಿಸು" ಎಂದು ಹೇಳಿದನು.