19 ಆ ತೀರ್ಪು ಏನೆಂದರೆ 3:19 ಯೋಹಾ 1:4, 5; ಎಫೆ 5:8:ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. 20 ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ. 21 ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ."
Publicidade