Pular para o conteúdo
Publicidade

ಯೋಹಾನನು 4:19-26

19 ಆ ಸ್ತ್ರೀ ಆತನಿಗೆ, "ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ. 20 ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ" ಎಂದಳು. 21 ಯೇಸು ಆಕೆಗೆ "ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ. 22 ಸಮಾರ್ಯದವರಾದ 4:22 2 ಅರಸು. 7:28-34:ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. 23 ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ. 24 ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು 4:24 ಕೀರ್ತ 145:18; ಫಿಲಿ. 3:3:ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ" ಎಂದನು.

25 ಆ ಹೆಂಗಸು ಆತನಿಗೆ 4:25 ಯೋಹಾ 1:41, 45; ಧರ್ಮೋ 18:18:"ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು" ಎಂದು ಹೇಳಲು, 26 ಯೇಸು ಆಕೆಗೆ "ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು" ಎಂದು ಹೇಳಿದನು.

Estes versículos te tocaram? Ore agora!

+581 estão orando agora.

Junte-se à corrente de oração.