21 ಯೇಸು ಆಕೆಗೆ "ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ. 22 ಸಮಾರ್ಯದವರಾದ 4:22 2 ಅರಸು. 7:28-34:ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. 23 ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.