ಯೇಸು ಸಬ್ಬತ್ ದಿನದಲ್ಲಿ ಒಬ್ಬ ರೋಗಿಯನ್ನು ಸ್ವಸ್ಥಮಾಡಿದ್ದರಿಂದ ಯೆಹೂದ್ಯರು ಆತನನ್ನು ವಿರೋಧಿಸಿದ್ದು
1 ಇದಾದ ಮೇಲೆ ಯೆಹೂದ್ಯರ ಒಂದು 5:1 ಅಥವಾ, ಹಬ್ಬ. ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು. 2 ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ 5:2 ಕೆಲವು ಪ್ರತಿಗಳಲ್ಲಿ ಬೇತ್ಸಾಯಿದವೆಂದು, ಬೇರೆ ಕೆಲವು ಪ್ರತಿಗಳಲ್ಲಿ ಬೇಥೆಸ್ಥ ಎಂದು ಬರೆದಿದೆ. ಬೇತ್ಸಥಾ ಎಂದು ಕರೆಯುತ್ತಾರೆ. 3,4 ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. 5:3-4 ಕೆಲವು ಪ್ರತಿಗಳಲ್ಲಿ ಈ ಭಾಗವು ಕಂಡುಬರುವುದಿಲ್ಲ(ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.) 5 ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು. 6 ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ "ನಿನಗೆ ಗುಣಹೊಂದಲು ಮನಸ್ಸಿದೆಯೋ?" ಎಂದು ಕೇಳಿದನು. 7 ಅದಕ್ಕೆ ಆ ರೋಗಿಯು "ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ" ಎಂದನು. 8 ಯೇಸು ಅವನಿಗೆ, "ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ" ಎಂದು ಹೇಳಿದನು. 9 ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,