44 "ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. 45 6:45 ಯೆಶಾ 54:13:‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ. 46 ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು. 47 ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.