53 ಅದಕ್ಕೆ ಯೇಸು ಅವರಿಗೆ, "ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ. 54 ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.