7 ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
8 ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ,
ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು."