Pular para o conteúdo
Publicidade

ನ್ಯಾಯಸ್ಥಾಪಕರು 4:4-9

IRVKAN Indian Revised Version (IRV) - Kannada - 2019

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು. 5 ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು. 6 ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, "ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು. 7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’" ಅಂದಳು. 8 ಬಾರಾಕನು ಆಕೆಗೆ, "ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ" ಅನ್ನಲು 9 ಆಕೆಯು, "ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು" ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.

Em outras traduções

  1. OKCV Kannada Contemporary Version

    4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲರಿಗೆ ನ್ಯಾಯ ತೀರಿಸುತ್ತಿದ್ದಳು. 5 ದೆಬೋರಳು ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಎಫ್ರಾಯೀಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸುತ್ತಿದ್ದಳು. ಇಸ್ರಾಯೇಲರು ಅವಳ ಬಳಿಗೆ ನ್ಯಾಯಕ್ಕಾಗಿ ಬರುತ್ತಿದ್ದರು. 6 ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, "ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು. 7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ, ಅವನ ರಥಗಳನ್ನೂ, ಅವನ ಸೈನ್ಯವನ್ನೂ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು, ನಿನ್ನ ಕೈಗೆ ಒಪ್ಪಿಸುವೆನು,’ ಎಂದು ಆಜ್ಞಾಪಿಸಿದನು," ಎಂದಳು.

    8 ಬಾರಾಕನು ಅವಳಿಗೆ, "ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು. ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವುದಿಲ್ಲ," ಎಂದನು.

    9 ಅದಕ್ಕವಳು, "ನಾನು ನಿನ್ನ ಸಂಗಡ ಖಂಡಿತವಾಗಿ ಬರುವೆನು. ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನತೆ ನಿನ್ನದಾಗಿರುವುದಿಲ್ಲ. ಏಕೆಂದರೆ ಯೆಹೋವ ದೇವರು ಸೀಸೆರನನ್ನು ಒಬ್ಬ ಸ್ತ್ರೀಯ ಕೈಗೆ ಒಪ್ಪಿಸಿಬಿಡುವೆನು," ಎಂದು ಹೇಳಿದಳು. ದೆಬೋರಳು ಎದ್ದು ಬಾರಾಕನ ಸಂಗಡ ಕೆದೆಷಿಗೆ ಹೋದಳು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.