19 ಅದಕ್ಕೆ ಆ ದೂತನು, "ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.
ದೇವದೂತನು ಯೇಸುವಿನ ಜನನವನ್ನು ಮುಂತಿಳಿಸಿದ್ದು
26 ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು;