ಮರಿಯಳ ಸ್ತುತಿಗೀತೆ
46 ಆಗ ಮರಿಯಳು,
"ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,
47 ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.
48 ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ.
ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,
49 ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ;
ಆತನ ನಾಮವು ಪರಿಶುದ್ಧವಾದುದು.
50 ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.
51 ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.
52 ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ,
ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.
53 ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ,
ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.
54,55 ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ
ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು,
ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ" ಎಂದಳು.