ದೇವರ ರಾಜ್ಯದ ಆಗಮನ
20 ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, "ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ. 21 ‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ" ಎಂದು ಹೇಳಿದನು.