ಯೇಸು ಪೇತ್ರನ ನಿರಾಕರಣೆಯನ್ನು ಮುಂತಿಳಿಸಿದ್ದು
31 "ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು. 32 ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು" ಎಂದು ಹೇಳಿದನು.