25 ಯೇಸು ಅವರಿಗೆ, "ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ, 26 ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ" ಎಂದು ಹೇಳಿದನು. 27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.
Publicidade