ಯೇಸು ಕ್ರಿಸ್ತನ ವಂಶಾವಳಿ
23 ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು; 24 ಹೇಲಿಯನು ಮತ್ಥಾತನ ಮಗನು; ಮತ್ಥಾತನನು ಲೇವಿಯ ಮಗನು; ಲೇವಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಯನ್ನಾಯನ ಮಗನು; 25 ಯನ್ನಾಯನು ಯೋಸೇಫನ ಮಗನು; ಯೋಸೇಫನು ಮತ್ತಥೀಯನ ಮಗನು; ಮತ್ತಥೀಯನು ಆಮೋಸನ ಮಗನು; ಆಮೋಸನು ನಹೂಮನ ಮಗನು; ನಹೂಮನು ಎಸ್ಲಿಯ ಮಗನು; ಎಸ್ಲಿಯನು ನಗ್ಗಾಯನ ಮಗನು; ನಗ್ಗಾಯನು ಮಹಾಥನ ಮಗನು; 26 ಮಹಾಥನು ಮತ್ತಥೀಯನ ಮಗನು; ಮತ್ತಥೀಯನು ಶಿಮೀಯನ ಮಗನು; ಶಿಮೀಯನು ಯೋಸೇಖನ ಮಗನು; ಯೋಸೇಖನು ಯೂದನ ಮಗನು; ಯೂದನು ಯೋಹಾನನ ಮಗನು; 27 ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು; 28 ನೇರಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಅದ್ದಿಯನ ಮಗನು; ಅದ್ದಿಯನು ಕೋಸಾಮನ ಮಗನು; ಕೋಸಾಮನು ಎಲ್ಮದಾಮನ ಮಗನು; ಎಲ್ಮದಾಮನು ಏರನ ಮಗನು; 29 ಏರನು ಯೆಹೋಷುವನ ಮಗನು; ಯೆಹೋಷುವನು ಎಲಿಯೇಜರನ ಮಗನು; ಎಲಿಯೇಜರನು ಯೋರೈಮನ ಮಗನು; ಯೋರೈಮನು ಮತ್ಥಾತನ ಮಗನು; ಮತ್ಥಾತನು ಲೇವಿಯನ ಮಗನು; 30 ಲೇವಿಯನು ಸಿಮಿಯೋನನ ಮಗನು; ಸಿಮಿಯೋನನು ಯೂದನ ಮಗನು; ಯೂದನು ಯೋಸೇಫನ ಮಗನು; ಯೋಸೇಫನು ಯೋನಾಮನ ಮಗನು; ಯೋನಾಮನು ಎಲಿಯಕೀಮನ ಮಗನು; 31 ಎಲಿಯಕೀಮನು ಮೆಲೆಯಾನ ಮಗನು; ಮೆಲೆಯಾನು ಮೆನ್ನನ ಮಗನು; ಮೆನ್ನನು ಮತ್ತಾಥನ ಮಗನು; ಮತ್ತಾಥನು ನಾಥಾನನ ಮಗನು; ನಾಥಾನನು ದಾವೀದನ ಮಗನು; 32 ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು; 33 ನಹಶೋನನು ಅಮ್ಮಿನಾದಾಬನ ಮಗನು; ಅಮ್ಮಿನಾದಾಬನು ಅದ್ಮಿನನ ಮಗನು; ಅದ್ಮಿನನು ಆರ್ನೈಯನ ಮಗನು; ಆರ್ನೈಯನು ಎಸ್ರೋನನ ಮಗನು; ಎಸ್ರೋನನು ಪೆರೆಚನ ಮಗನು; 34 ಪೆರೆಚನು ಯೂದನ ಮಗನು; ಯೂದನು ಯಾಕೋಬನ ಮಗನು; ಯಾಕೋಬನು ಇಸಾಕನ ಮಗನು; ಇಸಾಕನು ಅಬ್ರಹಾಮನ ಮಗನು; ಅಬ್ರಹಾಮನು ತೇರನ ಮಗನು; ತೇರನು ನಾಹೋರನ ಮಗನು; 35 ನಾಹೋರನು ಸೆರೂಗನ ಮಗನು; ಸೆರೂಗನು ರೆಗೂವನ ಮಗನು; ರೆಗೂವನು ಪೆಲೆಗನ ಮಗನು; ಪೆಲೆಗನು ಹೇಬೆರನ ಮಗನು; ಹೇಬೆರನು ಸಾಲನ ಮಗನು; 36 ಸಾಲನು ಕಯಿನಾನನ ಮಗನು; ಕಯಿನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮೆಕನ ಮಗನು; 37 ಲಾಮೆಕನು ಮೆತೂಷಲನ ಮಗನು; ಮೆತೂಷಲನು ಹನೋಕನ ಮಗನು; ಹನೋಕನು ಯೆರೆದನ ಮಗನು; ಯೆರೆದನು ಮಹಲಲೇಲನ ಮಗನು; ಮಹಲಲೇಲನು ಕಯಿನಾನನ ಮಗನು; 38 ಕಯಿನಾನನು ಎನೋಷನ ಮಗನು; ಎನೋಷನು ಸೇಥನ ಮಗನು; ಸೇಥನು ಆದಾಮನ ಮಗನು ಆದಾಮನು ದೇವರ ಮಗನು.