ಯೇಸುವಿನ ಅನುಯಾಯಿಗಳು
57 ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, "ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ" ಎಂದು ಹೇಳಲು, 58 ಆತನು ಅವನಿಗೆ, "ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ" ಎಂದು ಹೇಳಿದನು.
59 ಯೇಸು ಮತ್ತೊಬ್ಬನಿಗೆ, "ನನ್ನನ್ನು ಹಿಂಬಾಲಿಸು" ಎಂದು ಹೇಳಲು ಅವನು, "ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು" ಅಂದನು. 60 ಆದರೆ ಯೇಸು ಅವನಿಗೆ, "ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು" ಎಂದು ಹೇಳಿದನು.
61 ಇನ್ನೊಬ್ಬನು ಸಹ, "ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು" ಅಂದನು. 62 ಯೇಸು ಅವನಿಗೆ, "ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ" ಎಂದು ಹೇಳಿದನು.