21 ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ!
22 ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.
23 ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!