22 ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.
23 ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!
24 "ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು" ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.