ಪವಿತ್ರವಾದ ರೊಟ್ಟಿ
5 "ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು24:5 ಆರಾರು ಸೇರಿನದಾಗಿರಬೇಕು ಅಥವಾ ಏಫಾದ ಹತ್ತರಲ್ಲಿ ಎರಡನೆಯ ಭಾಗ.. 6 ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು. 7 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು. 8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು. 9 ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು" ಅಂದನು.