25 "‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
47 "‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು. 48 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು. 49 ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.