ರೋಗಿಗಳನ್ನು ಸ್ವಸ್ಥಮಾಡಿದ್ದು
29 1:29 ಪಾಠಾಂತರ ಆ ಮೇಲೆ ಆತನು ಬಂದನು. ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು. 30 ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು. 31 ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.