ಯೇಸುವಿನ ದೀಕ್ಷಾಸ್ನಾನ
9 ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು. 10 ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.