ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
13 ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು. 14 ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, "ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ. 15 ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ" ಎಂದು ಹೇಳಿದನು. 16 ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
ಮತ್ತಾ 19:16-30; ಲೂಕ 18:18-30