Pular para o conteúdo
Publicidade

ಮಾರ್ಕನು 10:35-45

ಜೆಬೆದಾಯನ ಮಕ್ಕಳ ಬಿನ್ನಹ

35 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, "ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು" ಹೇಳಿದರು. 36 ಅದಕ್ಕೆ ಆತನು ಅವರಿಗೆ, "ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?" ಎಂದು ಕೇಳಲು, 37 ಅವರು ಆತನಿಗೆ, "ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು" ಅಂದರು. 38 ಆದರೆ ಯೇಸು ಅವರಿಗೆ, "ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. 10:38 ಯೋಹಾ 18:11:ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? 10:38 ಲೂಕ 12:50. ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?" ಎಂದು ಕೇಳಲು ಅವರು "ನಮ್ಮಿಂದಾಗುವುದು" ಅಂದರು. 39 ಆಗ ಯೇಸು ಅವರಿಗೆ, "ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು. 40 ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು" ಎಂದು ಹೇಳಿದನು. 41 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು. 42 ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, "ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ. 43 ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು. 44 ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು. 45 ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ 10:45 1 ತಿಮೊ. 2:6:ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು" ಎಂದು ಹೇಳಿದನು.

ಮತ್ತಾ 20:29-34; ಲೂಕ 18:35-43

Estes versículos te tocaram? Ore agora!

+581 estão orando agora.

Junte-se à corrente de oração.