ವಿಧವೆಯ ಕಾಣಿಕೆ ಹಾಗು ದೇವರಿಗೆ ಪ್ರಿಯವಾದ ಕಾಣಿಕೆಯ ಬಗ್ಗೆ
41 ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು. 42 ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು. 43 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, "ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. 44 ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ" ಎಂದನು.