6 ಆದರೆ ಯೇಸು, "ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ. 7 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ. 8 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ. 9 ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ" ಎಂದನು.
Publicidade