ಯೇಸುವಿನ ದೇಹವನ್ನು ಸಮಾಧಿಯಲ್ಲಿಟ್ಟದ್ದು
42 ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು. 43 ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.