3 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು. 4 ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. 5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, "ಮಗನೇ, ನಿನ್ನ 2:5ಕೀರ್ತ 103:3; ಲೂಕ 7:48.ಪಾಪಗಳು ಕ್ಷಮಿಸಲ್ಪಟ್ಟಿವೆ" ಎಂದು ಹೇಳಿದನು. 6 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; 7 "ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?" ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು. 8 ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, "ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? 9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ? 10 ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು" ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ 11 2:11 ಯೋಹಾ 5:8; ಅ. ಕೃ. 3:6."ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ" ಅಂದನು. 12 ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, "ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ" ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.