17 ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು. 18 ಇದರ ನಿಮಿತ್ತ ಯೋಹಾನನು ಹೆರೋದನಿಗೆ, "ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ" ಎಂದು ಹೇಳುತ್ತಿದ್ದನು.