22 ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, "ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ. 23 ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ" ಎಂದು ಪ್ರಮಾಣಮಾಡಿದನು. 24 ಆಗ ಅವಳು ಹೊರಕ್ಕೆ ಹೋಗಿ, "ನಾನು ಏನು ಕೇಳಿಕೊಳ್ಳಲಿ?" ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, "ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ" ಅಂದಳು. 25 ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, "ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು 6:25 ದೊಡ್ಡ ತಟ್ಟೆಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ" ಎಂದು ಕೇಳಿಕೊಂಡಳು. 26 ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. 27 ಕೂಡಲೆ ತನ್ನ 6:27 ಕಾವಲುಗಾರಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು; 28 ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.