ಯೇಸು ಅನ್ಯಮತಸ್ಥಳ ಮಗಳನ್ನೂ ಸ್ವಸ್ಥಮಾಡಿದ್ದು
24 ಯೇಸು ಅಲ್ಲಿಂದ ಹೊರಟು 7:24 ಪಾಠಾಂತರ: ತೂರ್ ಸೀದೋನ್ ಪಟ್ಟಣಗಳ. ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು. 25 ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು. 26 ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ, 27 ಆತನು ಆಕೆಗೆ, "ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ" ಎಂದು ಹೇಳಿದನು. 28 ಆದರೆ ಅದಕ್ಕೆ ಆಕೆಯು, "ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ" ಎಂದು ಉತ್ತರಕೊಡಲು 29 ಆತನು, "ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು" ಅಂದನು. 30 ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.