6 ಅದಕ್ಕೆ ಆತನು, "ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ:
7:6 ಯೆಶಾ 29:13 "‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ,
ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
7 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ
ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.
8 ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ" ಎಂದು ಹೇಳಿದನು.