9 ಆತನು ಇನ್ನೂ ಅವರಿಗೆ, "ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ 7:9 ಲೂಕ 7:30; ಯೋಹಾ 12:48:ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ; 10 ‘ನಿನ್ನ 7:10 ವಿಮೋ 20:12:ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು 7:10 ವಿಮೋ 21:17:‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ. 11 ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ 12 ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ. 13 ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ" ಎಂದು ಹೇಳಿದನು.