ದಶಮಾಂಶ ಸಲ್ಲಿಸುವುದರಲ್ಲಿ ಮೋಸ
7 "ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು" ಇದು ಸೇನಾಧೀಶ್ವರನಾದ ಯೆಹೋವನ ನುಡಿ. "ಯಾವ ವಿಷಯದಲ್ಲಿ ತಿರುಗೋಣ?" ಎನ್ನುತ್ತೀರಿ. 8 "ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ. 9 ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ. 10 ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ. 11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು" ಇದು ಸೇನಾಧೀಶ್ವರನಾದ ಯೆಹೋವನ ನುಡಿ.