8 "ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ. 10 ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.