Pular para o conteúdo
Publicidade

ಮೀಕನು 2

ಬಡವರನ್ನು ದೋಚಿಕೊಳ್ಳುವವರಿಗೆ ದಂಡನೆ

1 ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ,

ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ.

ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.

2 ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ.

ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ.

ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.

3 ಆದಕಾರಣ ಯೆಹೋವನು ಇಂತೆನ್ನುತ್ತಾನೆ,

"ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ,

ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ,

ನೀವು ತಲೆಯೆತ್ತಿ ನಡೆಯುವುದಕ್ಕಾಗದು.

ಅದು ಕೆಟ್ಟ ಕಾಲವೇ ಸರಿ.

4 ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು.

‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ.

ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’" ಎಂದು

ಶೋಕಗೀತವಾಗಿ ಹಾಡುವರು.

5 ಹೀಗಿರಲು ಯೆಹೋವನ ಸಭೆಯವರ

ಭೂಮಿಯ ಮೇಲೆ ಚೀಟು ಹಾಕಿ ನೂಲೆಳೆಯಲಿಕ್ಕೆ ನಿಮ್ಮಲ್ಲಿ ಯಾರೂ ಇರುವುದಿಲ್ಲ.

ಸುಳ್ಳು ಪ್ರವಾದಿಗಳು

6 ಆಹಾ, ಆ ಕೆಡುಕರು "ಪ್ರವಾದನೆ ಮಾಡಬೇಡಿರಿ.

ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು,

ದೂಷಣೆಗಳು ತೊಲಗುವುದೇ ಇಲ್ಲ" ಎಂದು ಪ್ರವಾದನೆ ಮಾಡುತ್ತಾರೆ.

7 ಯಾಕೋಬ ವಂಶವೇ,

"ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ?

ಇಂಥ ಕೃತ್ಯಗಳು ಆತನವೋ" ಎಂದು ಏಕೆ ಹೇಳುತ್ತೀ?

ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.

8 ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ.

ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.

9 ನನ್ನ ಜನರ ಸ್ತ್ರೀಯರನ್ನು, ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ.

ಅವರ ಸಣ್ಣ ಮಕ್ಕಳಿಗೆ ನನ್ನ ಆಶೀರ್ವಾದದ2:9 ಆಶೀರ್ವಾದದ ಮಹಿಮೆಯ ಹಕ್ಕನ್ನು ಇನ್ನೆಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ.

10 ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು.

ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.

11 ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು,

"ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು" ಎಂದು ಹೇಳಿದರೆ,

ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.

ಇಸ್ರಾಯೇಲಿನ ರಕ್ಷಣೆಯ ವಾಗ್ದಾನ

12 ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು.

ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು.

ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು.

ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.

13 ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ.

ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ.

ಅವರ ಅರಸನು ಅವರ ಮುಂದೆ ತೆರಳಿದ್ದಾನೆ.

ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.

Estes versículos te tocaram? Ore agora!

+581 estão orando agora.

Junte-se à corrente de oração.