18 ನಿನಗೆ ಯಾವ ದೇವರು ಸಮಾನ?
ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ,
ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ.
ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ.
ಕರುಣೆಯೇ ಆತನಿಗೆ ಇಷ್ಟ.
19 ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು.
ನಮ್ಮ ಅಪರಾಧಗಳನ್ನು ಅಣಗಿಸುವವನು.
ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.