ಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದು
20 ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು. 21 ಹೇಗೆಂದರೆ, "ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು. 22 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು. 23 ಎಲೈ ಕಪೆರ್ನೌಮೇ 11:23 ಯೆಶಾ 14:13-15:ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. 24 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು" ಎಂದು ನಿಮಗೆ ಹೇಳುತ್ತೇನೆ ಅಂದನು.