14 "ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ,
13:14 ಯೆಶಾ 6:9, 10: ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ.
ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.
15 ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು.
ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ,
ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು
ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’" ಎಂಬುದೇ.
16 "ಆದರೆ ನೀವು ಧನ್ಯರು ಏಕೆಂದರೆ 13:16 ಲೂಕ 10:23, 24:ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.