ಅಡಗಿಸಿದ್ದ ನಿಧಿ, ಮುತ್ತುಗಳ ಮತ್ತು ಬಲೆಯ ಸಾಮ್ಯ
44 "ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು. 45 ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. 46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.