3 ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, "ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ? 4 ಹೇಗೆಂದರೆ 15:4 ವಿಮೋ 20:12:‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ 15:4 ವಿಮೋ 21:17:ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ. 5 ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ, 6 ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ. 7 ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,
8 15:8 ಯೆಶಾ 29:13: "ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ
ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
9 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು" ಎಂಬುದೇ.