ಯೇಸು ಫರಿಸಾಯರ ಮತ್ತು ಸದ್ದುಕಾಯರ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು
5 ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು. 6 ಯೇಸು ಅವರಿಗೆ "ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ 16:6 1 ಕೊರಿ 5:6-8; ಗಲಾ. 5:9. ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ" ಎಂದು ಹೇಳಿದನು. 7 ಅದಕ್ಕೆ ಅವರು, "ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ" ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 8 ಯೇಸು ಅದನ್ನು ತಿಳಿದು, "ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ? 9 ಆ ಐದು ರೊಟ್ಟಿಗಳನ್ನು 16:9 ಮತ್ತಾ 14:17-21. ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ? 10 ಇಲ್ಲವೆ ಆ 16:10 ಮತ್ತಾ 15:34-38:ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ? 11 ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ" ಅಂದನು. 12 ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.