ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು
15 "ನಿನ್ನ ಸಹೋದರನು ನಿನ್ನ ವಿರುದ್ಧ 18:15 ಕೆಲವು ಪ್ರತಿಗಳಲ್ಲಿ, ನಿನಗೆ ತಪ್ಪುಮಾಡಿದರೆ ಎಂದು ಬರೆದದೆ. ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. 16 ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ 18:16 ಧರ್ಮೋ 19:15:ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.