ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು
15 "ನಿನ್ನ ಸಹೋದರನು ನಿನ್ನ ವಿರುದ್ಧ 18:15 ಕೆಲವು ಪ್ರತಿಗಳಲ್ಲಿ, ನಿನಗೆ ತಪ್ಪುಮಾಡಿದರೆ ಎಂದು ಬರೆದದೆ. ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. 16 ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ 18:16 ಧರ್ಮೋ 19:15:ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. 17 ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ 18:17 ಕೆಲವು ಪ್ರತಿಗಳಲ್ಲಿ, ಭ್ರಷ್ಟನಂತೆಯೂ ಎಂದು ಬರೆದದೆ. ಸುಂಕದವನಂತೆಯೂ ಇರಲಿ.
18 "ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 19 18:19 ಮತ್ತಾ 7:7, 11; ಯೋಹಾ 15:7; 16:23:ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ. 20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ" ಅಂದನು.