3 ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, 19:3 ಮತ್ತಾ 5:31, 32:"ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?" ಎಂದು ಕೇಳಲು,
7 ಅದಕ್ಕೆ ಅವರು ಆತನನ್ನು, 19:7 ಧರ್ಮೋ 24:1. "ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?" ಎಂದು ಕೇಳಿದರು. 8 ಅದಕ್ಕೆ ಯೇಸು ಅವರಿಗೆ, "ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು. 9 ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; 19:9 ಈ ವಾಕ್ಯ ಕೆಲವು ಪ್ರತಿಗಳಲ್ಲಿ ಇಲ್ಲ. ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ" ಎಂದು ನಿಮಗೆ ಹೇಳುತ್ತೇನೆ ಅಂದನು.