4 ಆತನು ಪ್ರತ್ಯುತ್ತರವಾಗಿ, "ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು, 5 19:5 ಆದಿ 2:24; 1 ಕೊರಿ 6:16:‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’ 6 ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಅಂದನು.
8 ಅದಕ್ಕೆ ಯೇಸು ಅವರಿಗೆ, "ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು. 9 ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; 19:9 ಈ ವಾಕ್ಯ ಕೆಲವು ಪ್ರತಿಗಳಲ್ಲಿ ಇಲ್ಲ. ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ" ಎಂದು ನಿಮಗೆ ಹೇಳುತ್ತೇನೆ ಅಂದನು.