9 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು. 10 ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು. 11 ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ 2:11 ಕೀರ್ತ 72:10ಅದಕ್ಕೆ ಚಿನ್ನ, ಪರಿಮಳದ್ರವ್ಯ2:11 ಧೂಪದ್ರವ್ಯ ಮತ್ತು ರಕ್ತಬೋಳಗಳನ್ನು2:11 ರಾಳ ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು. 12 ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.