18 ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು. 19 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, "ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ" ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. 20 ಶಿಷ್ಯರು ಅದನ್ನು ನೋಡಿ ಬೆರಗಾಗಿ, "ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ" ಎಂದು ಆಶ್ಚರ್ಯಗೊಂಡರು. 21 ಅದಕ್ಕೆ ಯೇಸು, 21:21 ಮತ್ತಾ 7:7; 17:20; ಅ. ಕೃ. 10:20; ರೋಮಾ. 4:20; ಯಾಕೋಬ 1:6"ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು. 22 ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ" ಅಂದನು.
Publicidade
ಮತ್ತಾಯನು 21
Estes versículos te tocaram? Ore agora!
+581 estão orando agora.
Junte-se à corrente de oração.