17 ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು" ಅಂದರು. 18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, "ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ? 19 ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ" ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು. 20 ಆತನು, "ಈ ಸ್ವರೂಪವು ಈ ಮುದ್ರೆಯೂ ಯಾರದು?" ಎಂದು ಕೇಳಿದ್ದಕ್ಕೆ 21 ಅವರು, "ಕೈಸರನದು" ಅಂದರು. ಆಗ ಆತನು ಅವರಿಗೆ, 22:21 ರೋಮಾ. 13:7"ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ" ಎಂದು ಹೇಳಿದನು.
Publicidade