Pular para o conteúdo
Publicidade

ಮತ್ತಾಯನು 23:1-7

ಯೇಸು ಶಾಸ್ತ್ರಿಗಳನ್ನೂ ಫರಿಸಾಯರನ್ನೂ ಗದರಿಸಿದ್ದು; ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟದ್ದು

1 ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ, 2 "ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ23:2 ಮೋಶೆಯ ಅಧಿಕಾರದಲ್ಲಿ ಕುಳಿತುಕೊಂಡಿದ್ದಾರೆ; 3 ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ. 4 23:4 ಯಾರು ಹೊರಲಾರದಂಥಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು 23:4 ಕದಲಿಸಲೊಲ್ಲರುಮುಟ್ಟಲೊಲ್ಲರು. 5 ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ 23:5 ಧರ್ಮೋ 6:8; 11, 18ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ. 6 ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು; 7 ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.

Estes versículos te tocaram? Ore agora!

+581 estão orando agora.

Junte-se à corrente de oração.